ರಾಜ್ಯ ಬಜೆಟ್|‌ ‘ಮನೆ ಮನೆಗೆ ಬರಲಿದೆ ಆರೋಗ್ಯ ಶಿಬಿರʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

‘ಮನೆ ಮನೆಗೆ ಆರೋಗ್ಯ’ ಎಂಬ ಕಾರ್ಯಕ್ರಮದಡಿಯಲ್ಲಿ ನಿಮ್ಮ ಮನೆ ಬಳಿ ಬರಲಿದೆ ವೈದ್ಯಕೀಯ ತಂಡ. ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜಿಸಲಾಗುವುದು.

ತೀವ್ರವಾದ ಕಾಯಿಲೆಗಳನ್ನು ಮೊದಲೇ ಪತ್ತೆಹಚ್ಚಿ ಜನರ ಆರೋಗ್ಯ ಕಾಪಾಡಲು ಆದ್ಯತೆ ನೀಡಲಾಗಿದೆ. ಈ ಯೋಜನೆಯಡಿ ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿಗಳನ್ನು ತಲುಪಿಸಲು ವ್ಯವಸ್ಥೆ ಮಾಡಲಾಗವುದು ಎಂದು ಈ ಬಾರಿ ಬಜೆಟ್​​ನಲ್ಲಿ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!