ಗೋಡಂಬಿಯಲ್ಲಿ ಪ್ರೋಟೀನ್, ವಿಟಮಿನ್, ಮಿನರಲ್ಸ್ ಅಂಶಗಳು ಹೇರಳವಾಗಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಗೋಡಂಬಿ ಪ್ರಮುಖ ಪಾತ್ರ ವಹಿಸುತ್ತದೆ. ಗೋಡಂಬಿಯ ನಿಯಮಿತ ಸೇವನೆಯು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಪ್ರಯೋಜನಕಾರಿಯಾಗಿದೆ. ಮಿತವಾಗಿ ಸೇವಿಸಿದಾಗ, ಅದು ನಮ್ಮ ದೇಹಕ್ಕೆ ಹೆಚ್ಚಿನ ಪ್ರಯೋಜನಗಳನ್ನು ತರುತ್ತದೆ.
ಗೋಡಂಬಿ ಹೃದಯದ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದರಲ್ಲಿ ಕೊಬ್ಬಿನಂಶವಿದ್ದರೂ ಆರೋಗ್ಯಕ್ಕೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಗೋಡಂಬಿ ತಿನ್ನುವುದರಿಂದ ಹೃದಯ ಸ್ನಾಯುಗಳು ಬಲಗೊಳ್ಳುತ್ತವೆ.