ಶೇಂಗಾ ಎಣ್ಣೆ ಅಥವಾ ಕಡಲೆಬೀಜ ಎಣ್ಣೆಯನ್ನು ಅಡುಗೆಗೆ ಬಳಸುವುದರಿಂದ ಹಲವಾರು ಪ್ರಯೋಜನಗಳಿವೆ. ಈ ಎಣ್ಣೆಯು ಒಮೆಗಾ -3 ಮತ್ತು 6 ಫ್ಯಾಟಿ ಆಸಿಡ್ ಫೈಬರ್ ಜಾಸ್ತಿ ಇದ್ದು, ಫೈಬರ್, ಪ್ರೋಟೀನ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸೋಡಿಯಂನಲ್ಲಿ ಸಮೃದ್ಧವಾಗಿದೆ.
ಕಡಲೆಕಾಯಿ ಎಣ್ಣೆಯು ಕೆಟ್ಟ ಕೊಬ್ಬನ್ನು ಕಡಿಮೆ ಮಾಡುತ್ತದೆ. ಇದು ಹೃದಯಕ್ಕೆ ಒಳ್ಳೆಯದು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಕಡಲೆಕಾಯಿ ಎಣ್ಣೆ ಮಧುಮೇಹಿಗಳಿಗೂ ಉಪಯುಕ್ತವಾಗಿದೆ. ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ನಿಮ್ಮ ಮೆದುಳು ಚುರುಕಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ.