ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾದಾಮಿ ತಿನ್ನೋದ್ರಿಂದ ನಮ್ಮ ಚರ್ಮ, ಕೂದಲು, ಹಾಗೂ ಆರೋಗ್ಯ ಎಷ್ಟು ಚೆನ್ನಾಗಿರುತ್ತೆ ಎಂಬುದನ್ನು ಇವತ್ತು ನೋಡೋಣ.
ಕೂದಲಿನ ಹೊಳಪು ಮತ್ತು ಬಲವನ್ನು ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಇ, ಆಂಟಿಆಕ್ಸಿಡೆಂಟ್ಸ್, ಆರೋಗ್ಯಕರ ಕೊಬ್ಬು ನಮ್ಮ ಚರ್ಮವನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ.
ಚರ್ಮವನ್ನು ಪೋಷಿಸುತ್ತದೆ
ಬಾದಾಮಿಯು ಚರ್ಮವನ್ನು ಮೃದುಗೊಳಿಸುವ ಮತ್ತು ಆರೋಗ್ಯಕರವಾಗಿರುವಂತೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಅಟೊಪಿಕ್ ಎಸ್ಜಿಮಾದಂತಹ ಒಣ ಚರ್ಮದ ಸಮಸ್ಯೆಗೆ ಚಿಕಿತ್ಸೆ ನೀಡಲು ಬಾದಾಮಿ ಎಣ್ಣೆಯನ್ನು ಹೆಚ್ಚಾಗಿ ಶಿಫಾರಸು ಮಾಡಲಾಗುತ್ತದೆ.
ಉತ್ತಮ ಆರೋಗ್ಯಕ್ಕೆ ಸಹಕಾರಿ
ಬಾದಾಮಿಯು ಮೊನೊಸಾಚುರೇಟೆಡ್ ಫ್ಯಾಟಿ ಆಸಿಡ್ (MUFA) ಗಳಿಂದ ತುಂಬಿದ್ದು, ಇದು ಇನ್ಸುಲಿನ್ ಸುಧಾರಿಸಲು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ.
ತೂಕ ನಿರ್ವಹಣೆಗೆ ಸಹಾಯಕ
ತೂಕವನ್ನು ನಿರ್ವಹಿಸಲು ಬಯಸುವವರಿಗೆ, ಬಾದಾಮಿ ಉತ್ತಮ ಆಯ್ಕೆಯಾಗಿದೆ. ಬಾದಾಮಿಯಲ್ಲಿರುವ ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬಿನ ಸಂಯೋಜನೆಯು ಹೊಟ್ಟೆ ತುಂಬಿದ ಭಾವನೆಯನ್ನು ಉತ್ತೇಜಿಸುತ್ತದೆ ಮತ್ತು ಒಟ್ಟಾರೆ ಕ್ಯಾಲೊರಿ ಸೇವನೆಯನ್ನು ಕಡಿಮೆ ಮಾಡುತ್ತದೆ.
ಮೆದುಳಿನ ಆರೋಗ್ಯ ಹೆಚ್ಚಿಸುತ್ತದೆ
ಬಾದಾಮಿಯ ಗುಣಗಳಲ್ಲಿ ಅತ್ಯುತ್ತಮ ಪ್ರಯೋಜನವೆಂದರೆ ಮೆದುಳಿನ ಕ್ಷಮತೆ ಹೆಚ್ಚಿಸುವುದು. ಬಾದಾಮಿಯಲ್ಲಿರುವ ವಿಟಮಿನ್ ಇ ಮೆದುಳಿನ ತಾರ್ಕಿಕ, ಸ್ಮರಣಾ ಮತ್ತು ಚಿಂತನಾ ಸಾಮರ್ಥ್ಯಗಳನ್ನು ಹೆಚ್ಚಿಸುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಬಾದಾಮಿಯನ್ನು ಒಣದಾಗಿದ್ದಾಗ ಸೇವಿಸುವುದಕ್ಕಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ನೆನೆಸಿಟ್ಟ ಬಾದಾಮಿ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಅಲ್ಲದೇ, ಪೋಷಕಾಂಶಗಳನ್ನು ಹೀರಿಕೊಳ್ಳಲು ಹೆಚ್ಚಿನ ಸಹಾಯ ಸಿಗುತ್ತದೆ.
ಉರಿಯೂತ ಕಡಿಮೆ ಮಾಡುತ್ತದೆ
ಬಾದಾಮಿಯು ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಪಾಲಿಫಿನಾಲ್ ಉರಿಯೂತ ಕಡಿಮೆಗೊಳಿಸುವ ಸಾಮರ್ಥ್ಯ ಹೊಂದಿರುತ್ತದೆ.