HEALTH | ಪಿಸ್ತಾ ತಿನ್ನುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತಾ?

ಪಿಸ್ತಾದಲ್ಲಿ ಪ್ರೋಟೀನ್, ಫೈಬರ್, ವಿಟಮಿನ್ಗಳು ಮತ್ತು ಖನಿಜಾಂಶಗಳು ಸಮೃದ್ಧವಾಗಿವೆ. ಇದು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ.

ಪಿಸ್ತಾ ಹೃದಯಕ್ಕೆ ಉಪಯುಕ್ತವಾದ ಅಮೈನೋ ಆಮ್ಲಗಳು, ಆಂಟಿ ಆಕ್ಸಿಡೆಂಟ್ ಗಳು, ಸ್ಟೆರಾಲ್ ಗಳನ್ನು ಹೊಂದಿದೆ. ಇದು ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ತಡೆಯುತ್ತದೆ ಮತ್ತು ಹೃದಯವನ್ನು ಚೆನ್ನಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳುತ್ತದೆ.

ಬೊಜ್ಜು ತುಂಬಿಕೊಂಡಿರುವವರು ತಮ್ಮ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಸಂಜೆಯ ಸಮಯದಲ್ಲಿ ಸ್ನ್ಯಾಕ್ಸ್ ತರಹ ಪಿಸ್ತಾ ಬೀಜಗಳನ್ನು ಸೇವಿಸುವುದರಿಂದ ತೂಕ ನಿಯಂತ್ರಣವಾಗುತ್ತದೆ. ದೀರ್ಘ ಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ಉಂಟಾಗುತ್ತದೆ.

ಪಿಸ್ತಾದಲ್ಲಿ ಅಸೆನ್ಸಿಯಲ್ ಮತ್ತು ಲುಟೀನ್ ನಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಇವು ಕಣ್ಣಿನ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತವೆ. ಕುರುಡುತನ, ಕಣ್ಣಿನ ಪೊರೆ, ದೃಷ್ಟಿ ದೋಷಗಳನ್ನು ನಿಯಂತ್ರಣದಲ್ಲಿ ಇಡಬಹುದು.

ಪಿಸ್ತಾ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ. ಪ್ರತಿದಿನ ಪಿಸ್ತಾ ತಿನ್ನುವುದರಿಂದ ಮೆದುಳಿನ ಕಾರ್ಯವೂ ಸುಧಾರಿಸುತ್ತದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!