ಮಳೆಗಾಲದಲ್ಲಿ ಆರೋಗ್ಯಕ್ಕೆ ಉತ್ತಮವಾದ ಹಣ್ಣುಗಳು ಯಾವುವು ಎಂದು ತಿಳಿಯೋಣ:
ಸೇಬು: ಸೇಬುಗಳು ವಿಟಮಿನ್ ಸಿ ಮತ್ತು ಫೈಬರ್‌ನಿಂದ ಸಮೃದ್ಧವಾಗಿವೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತವೆ.
ಪೇರಳೆ: ಪೇರಳೆಯು ವಿಟಮಿನ್ ಸಿ ಮತ್ತು ಕರಗುವ ನಾರಿನಾಂಶವನ್ನು ಹೊಂದಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಜೀರ್ಣಕಾರಿ ಆರೋಗ್ಯವನ್ನು ಕಾಪಾಡುತ್ತದೆ.
ದಾಳಿಂಬೆ: ದಾಳಿಂಬೆಯಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿದ್ದು, ಇದು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಲಿಚಿ: ಲಿಚಿಯು ವಿಟಮಿನ್ ಸಿಯ ಉತ್ತಮ ಮೂಲವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಚರ್ಮದ ಆರೋಗ್ಯಕ್ಕೆ ಒಳ್ಳೆಯದು.
ಬಾಳೆಹಣ್ಣು: ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿವೆ. ಇದು ಶಕ್ತಿಯನ್ನು ನೀಡುತ್ತದೆ ಮತ್ತು ಜೀರ್ಣಕ್ರಿಯೆಗೆ ಸಹಕಾರಿ.
ನೆರಳೆ ಹಣ್ಣು: ಇದು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಪ್ಲಮ್ಸ್: ಪ್ಲಮ್ಸ್ ವಿಟಮಿನ್ ಸಿ ಮತ್ತು ಕೆ ಯಿಂದ ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಚೆರ್ರಿ: ಚೆರ್ರಿಗಳು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಪಪ್ಪಾಯಿ: ಪಪ್ಪಾಯಿಯಲ್ಲಿರುವ ಕಿಣ್ವಗಳು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ.
ಮಳೆಗಾಲದಲ್ಲಿ ಹಣ್ಣುಗಳನ್ನು ಸೇವಿಸುವಾಗ ಅವುಗಳನ್ನು ಚೆನ್ನಾಗಿ ತೊಳೆದು ತಿನ್ನಬೇಕು. ಕತ್ತರಿಸಿದ ಹಣ್ಣುಗಳನ್ನು ಹೆಚ್ಚು ಹೊತ್ತು ಇಡಬೇಡಿ.
ಹೆಚ್ಚು ನೀರಿನ ಅಂಶವಿರುವ ಹಣ್ಣುಗಳಾದ ಕಲ್ಲಂಗಡಿ ಮತ್ತು ಕರ್ಬೂಜಗಳನ್ನು ಅವಾಯ್ಡ್ ಮಾಡುವುದು ಒಳ್ಳೆಯದು, ಏಕೆಂದರೆ ಅವು ಬೇಗನೆ ಕಲುಷಿತಗೊಳ್ಳುವ ಸಾಧ್ಯತೆ ಇರುತ್ತದೆ. ರಸ್ತೆ ಬದಿಯಲ್ಲಿ ಕತ್ತರಿಸಿದ ಹಣ್ಣುಗಳು ಮತ್ತು ಜ್ಯೂಸ್‌ಗಳನ್ನು ಸೇವಿಸುವುದನ್ನು ತಪ್ಪಿಸಿ.