ಚಳಿಗಾಲದಲ್ಲಿ ಪಾಲಕ್ ಸೊಪ್ಪನ್ನು ಬಳಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಪಾಲಕ್ ಜ್ಯೂಸ್‌ನಲ್ಲಿ ನಾರಿನಂಶವೂ ಹೆಚ್ಚಾಗಿರುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ದೂರ ಮಾಡುತ್ತದೆ.
ಪಾಲಕ್ ಜ್ಯೂಸ್ ನಲ್ಲಿರುವ ಕಬ್ಬಿಣಾಂಶವು ದೇಹದಲ್ಲಿ ರಕ್ತವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪಾಲಕ್ ಜ್ಯೂಸ್ ಕುಡಿಯುವುದರಿಂದ ನೆನಪಿನ ಶಕ್ತಿ ಹೆಚ್ಚಾಗುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.
ಪಾಲಕ್ ಜ್ಯೂಸ್ ಚಯಾಪಚಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಈ ಕಾರಣದಿಂದಾಗಿ ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದಿಲ್ಲ ಮತ್ತು ತೂಕವು ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸುತ್ತದೆ.