ಚಳಿಗಾಲದಲ್ಲಿ ಮೈಯನ್ನು ಬೆಚ್ಚಗಿಟ್ಟುಕೊಳ್ಳುವುದರ ಜೊತೆಗೆ, ನಿಮ್ಮ ದೇಹದ ಒಳಗಿನ ಆರೋಗ್ಯ ಹೇಗಿದೆ ಎಂದು ತಿಳಿಯಲು ಈ ಪರೀಕ್ಷೆಗಳು ಅತಿ ಅಗತ್ಯ:
ಲಿಪಿಡ್ ಪ್ರೊಫೈಲ್ ಪರೀಕ್ಷೆ: ಈ ಪರೀಕ್ಷೆಯು ನಿಮ್ಮ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ತಿಳಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ (LDL) ಹೆಚ್ಚಾದಲ್ಲಿ ರಕ್ತನಾಳಗಳಲ್ಲಿ ಅಡೆತಡೆ ಉಂಟಾಗಿ ಹೃದಯಾಘಾತ ಸಂಭವಿಸಬಹುದು.
ರಕ್ತದೊತ್ತಡ ತಪಾಸಣೆ: ಚಳಿಗಾಲದಲ್ಲಿ ಸಾಮಾನ್ಯವಾಗಿಯೇ ರಕ್ತದೊತ್ತಡ ಏರಿಕೆಯಾಗುತ್ತದೆ. ನಿಯಮಿತವಾಗಿ ಬಿಪಿ ತಪಾಸಣೆ ಮಾಡಿಸಿಕೊಳ್ಳುವುದರಿಂದ ಅಧಿಕ ರಕ್ತದೊತ್ತಡದಿಂದಾಗುವ ಅಪಾಯವನ್ನು ತಪ್ಪಿಸಬಹುದು.
ಇಸಿಜಿ ಅಥವಾ ಎಕೋ ಕಾರ್ಡಿಯೋಗ್ರಾಮ್: ಹೃದಯದ ಬಡಿತ ಮತ್ತು ಅದರ ಕಾರ್ಯಕ್ಷಮತೆಯನ್ನು ಅಳೆಯಲು ಈ ಪರೀಕ್ಷೆಗಳು ಸಹಕಾರಿ. ಹೃದಯದಲ್ಲಿ ಸಣ್ಣ ಬದಲಾವಣೆಗಳಿದ್ದರೂ ಇವುಗಳ ಮೂಲಕ ಮುನ್ನೆಚ್ಚರಿಕೆ ವಹಿಸಬಹುದು.

