Monday, June 27, 2022

Latest Posts

ಕೋವಿಡ್‌ ಭೀತಿ: 9 ರಾಜ್ಯಗಳ ಆರೋಗ್ಯ ಸಚಿವರ ಜತೆ ಮನ್‌ಸುಕ್‌ ಮಾಂಡವಿಯಾ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವಿಯಾ ಅವರು ವರ್ಚುವಲ್ ಸಭೆ ನಡೆಸಲಿದ್ದಾರೆ.
ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್​, ಹರ್ಯಾಣ, ಉತ್ತರಾಖಂಡ್​, ದೆಹಲಿ, ಲಡಾಖ್​, ಉತ್ತರಪ್ರದೇಶ ಮತ್ತು ಚಂಡಿಗಢ್‌ ನ ಆರೋಗ್ಯ ಸಚಿವರು ಪಾಲ್ಗೊಳ್ಳಲಿದ್ದಾರೆ.
ಆಯಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೊರೋನಾ ಪರಿಸ್ಥಿತಿ ಕುರಿತು ಕೇಂದ್ರ ಸಚಿವರು ಮಾಹಿತಿ ಪಡೆಯಲಿದ್ದಾರೆ.
ಈ ಹಿಂದೆ ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್​, ಗೋವಾ, ದಾದ್ರಾ ಮತ್ತು ನಗರ ಹವೇಲಿ ಪ್ರದೇಶದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದರು.
ಇದೇ ಸಮಯದಲ್ಲಿ ರಾಜ್ಯಗಳಲ್ಲಿ ಆರೋಗ್ಯ ಮೂಲ ಸೌಕರ್ಯ, ಲಸಿಕೀಕರಣ, ತಾತ್ಕಾಲಿಕ ಆಸ್ಪತ್ರೆಗಳ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss