ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಒಟ್ಟು 57,184 ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಲೋಕಸಭೆಗೆ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಸದಸ್ಯರು ಕೇಳಲಾದ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದ ಅವರು, ಈ ಪೈಕಿ 50,612 ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ದಾಖಲೆಗಳ ಪ್ರಕಾರ ದೇಶದಲ್ಲಿ ಸುಮಾರು 14.6 ಕೋಟಿ ಮಹಿಳೆಯರು ಸ್ತನ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದಾರೆ. ದೇಶದಲ್ಲಿ ಒಂಬತ್ತು ಕೋಟಿಗೂ ಅಧಿಕ ಮಹಿಳೆಯರು ಗರ್ಭಕಂಠ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದಾರೆ. ಅದರಲ್ಲಿ 96,747 ಮಹಿಳೆಯರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. 86,196 ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎನ್‌ಸಿಡಿ ಡೇಟಾ ಪೋರ್ಟಲ್ ಮಾಹಿತಿ ಉಲ್ಲೇಖಿಸಿ ಅವರು ಉತ್ತರ ಒದಗಿಸಿದ್ದಾರೆ.
ಎನ್‌ಸಿಡಿ ಡೇಟಾ ಪೋರ್ಟಲ್‌ನ್ನು ಸಾಂಕ್ರಾಮಿಕವಲ್ಲದ ರೋಗಗಳ ಮೇಲೆ ನಿಗಾ ವಹಿಸಿ, ನಿಯಂತ್ರಿಸಲು ಕೇಂದ್ರ ಸರ್ಕಾರ 2018ರಲ್ಲಿ ಸ್ಥಾಪಿಸಿದೆ.