ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿನ ಬೆಳವಣಿಗೆಯಲ್ಲಿ ನಮ್ಮ ಆರೋಗ್ಯದ ಕಡೆ ನಾವು ಸಮಯ ಕೊಡುವದರಲ್ಲಿ ಒಂದು ಹೆಜ್ಜೆ ಹಿಂದೆ ಇದ್ದೇವೆ. ಹೌದು, ಈಗಿನ ವಾತಾವರಣದಲ್ಲಿ ಹಾಗೂ ಬ್ಯುಸಿ ಲೈಫ್ ನಲ್ಲಿ ಸಾಕಷ್ಟು ಸಮಸ್ಯೆಗಳನ್ನ ನಾವು ಎದುರಿಸಬೇಕಾಗುತ್ತೆ. ಈಗಿನ ಕಾಲದಲ್ಲಿ ಚಿಕ್ಕ ವಯಸ್ಸಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅಷ್ಟೇ ಅಲ್ಲ ವಯಸ್ಸಾದವರಲ್ಲಿ ಮಧುಮೇಹ ಬಹಳ ಹೆಚ್ಚಾಗಿ ಕಾಣಿಸುತ್ತದೆ. ಇಂತಹ ಸಮಸ್ಯೆಗೆ ಗಿಡಮೂಲಿಕೆಗಳಿಂದ ಪರಿಹಾರ ಸಿಗುತ್ತೆ ಅಂದ್ರೆ ನೀವು ಒಪ್ಪುತ್ತೀರಾ? ಹಾಗಾದರೆ ಯಾವ ಗಿಡಮೂಲಿಕೆಯಿಂದ ಮಧುಮೇಹ ಸಮಸ್ಯೆಗೆ ಪರಿಹಾರ ಸಿಗುತ್ತೆ ಅನ್ನೋದನ್ನ ನೋಡೋಣ..
ತುಳಸಿ ಎಲೆ
ತುಳಸಿಯನ್ನು ಸಸ್ಯಗಳ ರಾಣಿ ಎಂದು ಪರಿಗಣಿಸಲಾಗುತ್ತದೆ. ಇದು ನಮ್ಮ ದೇಹವನ್ನು ವಿವಿಧ ರೋಗಗಳಿಂದ ರಕ್ಷಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಡಯಾಬಿಟಿಸ್ ಇರುವವರಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.
ಬೇವು
ಪ್ರತಿದಿನ ಬೇವಿನ ಎಲೆಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಬಹುದು. ಈ ಎಲೆಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಿಲ್ವಪತ್ರೆ
ಶಿವಪೂಜೆಯಲ್ಲಿ ಬಿಲ್ವಪತ್ರೆಯು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ ಮತ್ತು ಆರೋಗ್ಯದ ದೃಷ್ಟಿಯಿಂದಲೂ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಬಿಲ್ವಪತ್ರೆಯಲ್ಲಿ ಕ್ಯಾಲ್ಸಿಯಂ, ಫೈಬರ್ ಮತ್ತು ವಿಟಮಿನ್ ಎ, ಸಿ, ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದರ ದೈನಂದಿನ ಸೇವನೆಯು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.