ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಲಕ್ಕಿ ನಮ್ಮ ಅಡುಗೆ ಮನೆಯಲ್ಲಿರುವ ಸಾಂಬಾರ ಪದಾರ್ಥಗಳಲ್ಲಿ ಒಂದಾಗಿದೆ. ಅಡುಗೆಯ ರುಚಿ ಮತ್ತು ಪರಿಮಳವನ್ನು ಹೆಚ್ಚಿಸಲು ಇವುಗಳನ್ನು ಬಳಸಲಾಗುತ್ತದೆ. ಸಿಹಿತಿಂಡಿಗಳು, ಚಹಾದಂತಹ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಅಡುಗೆಯ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು.
- ಏಲಕ್ಕಿ ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ನಲ್ಲಿ ಸಮೃದ್ಧವಾಗಿವೆ. ಇವೆಲ್ಲವೂ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಏಲಕ್ಕಿಯಲ್ಲಿರುವ ಪೊಟ್ಯಾಸಿಯಮ್ ಹೃದಯದ ಕಾರ್ಯನಿರ್ವಹಣೆಯನ್ನು ಮತ್ತು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ರಕ್ತದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
- ಅದರಲ್ಲೂ ನಾವು ಸೇವಿಸಿದ ಆಹಾರ ಬೇಗ ಜೀರ್ಣವಾಗುವಂತೆ ಮಾಡುವಲ್ಲಿ ಏಲಕ್ಕಿ ಶಕ್ತಿಶಾಲಿಯಾಗಿದೆ. ಇದರಲ್ಲಿರುವ ಔಷಧೀಯ ಗುಣಗಳು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಏಲಕ್ಕಿಯು ಆಸಿಡ್ ರಿಫ್ಲಕ್ಸ್ ಮತ್ತು ಗ್ಯಾಸ್ಟ್ರಿಕ್ ಅಸ್ವಸ್ಥತೆಗಳಿಗೆ ಸಹಾಯ ಮಾಡುವ ಗುಣಗಳನ್ನು ಹೊಂದಿದೆ.
- ಹಸಿವಿನ ಕೊರತೆಯು ಅನೇಕ ರೋಗಗಳಿಗೆ ಕಾರಣವಾಗಿದೆ. ಕ್ಯಾನ್ಸರ್ ಮತ್ತು ಅನೋರೆಕ್ಸಿಯಾ ಕೂಡ ಪರಿಣಾಮ ಬೀರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಏಲಕ್ಕಿ ತಿಂದರೆ ಹಸಿವಾಗುವ ಸಾಧ್ಯತೆ ಇರುತ್ತದೆ.
- ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು ಏಲಕಕಿ ಬಹಳಷ್ಟು ಸಹಾಯ ಮಾಡುತ್ತವೆ.
- ಮಧುಮೇಹವನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸಬಹುದು. ಇವುಗಳಲ್ಲಿ ಮ್ಯಾಂಗನೀಸ್ ಅಧಿಕವಾಗಿರುತ್ತದೆ. ಇದು ಮಧುಮೇಹ ವಿರೋಧಿ ಗುಣಗಳನ್ನು ಹೊಂದಿದೆ.
- ಅಸ್ತಮಾ ಮತ್ತು ಗೊರಕೆಯನ್ನು ಕಡಿಮೆ ಮಾಡುತ್ತದೆ..ಕೆಮ್ಮನ್ನು ತಡೆಯಲು ಮತ್ತು ಉಸಿರಾಟದ ತೊಂದರೆಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ.
- ಬಾಯಿ ದುರ್ವಾಸನೆ ಹೋಗಲಾಡಿಸುತ್ತದೆ. ಪ್ರತಿನಿತ್ಯ ಎರಡು ಏಲಕ್ಕಿಯನ್ನು ಬಾಯಲ್ಲಿ ಜಗಿಯುವುದರಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ.