ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂಪರ್ ಸ್ಟಾರ್’ ನಟ ರಜನಿಕಾಂತ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ಕಡೆಯಿಂದಲೇ ಅಧಿಕೃತ ಮಾಹಿತಿ ಹೊರಬಿದ್ದಿದೆ.
ರಜನಿಕಾಂತ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದೆ. ಅದಕ್ಕೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ತನಾಳ ಉಬ್ಬಿದ್ದರಿಂದ ಸ್ಟೆಂಟ್ ಹಾಕಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
‘ರಜನಿಕಾಂತ್ ಅವರನ್ನು ಅಪೋಲೋ ಆಸ್ಪತ್ರೆಗೆ ಸೆಪ್ಟೆಂಬರ್ 30ರಂದು ದಾಖಲಿಸಲಾಗಿತ್ತು. ಅವರ ರಕ್ತನಾಳದಲ್ಲಿ ಊತ ಕಾಣಿಸಿಕೊಂಡಿತ್ತು. ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಹಿರಿಯ ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಸ್ಟೆಂಟ್ ಹಾಕಿದ್ದಾರೆ. ಅಂದುಕೊಂಡ ರೀತಿಯೇ ಚಿಕಿತ್ಸೆ ಫಲಕಾರಿ ಆಗಿದೆ ಎಂದು ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ತಿಳಿಸುತ್ತೇವೆ’ ಎಂದು ಆಸ್ಪತ್ರೆಯ ಕಡೆಯಿಂದ ಹೆಲ್ತ್ ಅಪ್ಡೇಟ್ ನೀಡಲಾಗಿದೆ.
ಆದಷ್ಟು ಬೇಗ ರಜನಿಕಾಂತ್ ಅವರು ಗುಣಮುಖರಾಗಲಿ ಎಂದು ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ. ‘ರಜನಿಕಾಂತ್ ಆರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಎರಡು ದಿನಗಳಲ್ಲಿ ಅವರು ಮನೆಗೆ ತೆರಳಲಿದ್ದಾರೆ’ ಎಂದು ಕೂಡ ಆಸ್ಪತ್ರೆಯ ಕಡೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದೆ.