ರುಚಿಕರವಾದ ಏಲಕ್ಕಿ ಕೇವಲ ಅಡುಗೆಗೆ ಮಾತ್ರ ಸೂಕ್ತವಲ್ಲ, ಆದರೆ ನಿಮ್ಮ ಆರೋಗ್ಯಕ್ಕೂ ಒಳ್ಳೆಯದು.
ನಿಮಗೆ ಸಮಯವಿದ್ದಾಗ ಏಲಕ್ಕಿ ಪುಡಿಯನ್ನು ತಯಾರಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ತಕ್ಷಣವೇ ನಿವಾರಿಸಬಹುದು.
- ಬಾಯಿ ಹುಣ್ಣು ಗುಣವಾಗಬೇಕೆಂದರೆ ಏಲಕ್ಕಿ ಪುಡಿಗೆ ಜೇನುತುಪ್ಪ ಸೇರಿಸಿ ಸೇವಿಸಿ.
- ಉರಿ ಮೂತ್ರವಿದ್ದಲ್ಲಿ ಏಲಕ್ಕಿ ಪುಡಿಯ ಜೊತೆ ನೆಲ್ಲಿಕಾಯಿ ಪುಡಿಯನ್ನು ಬೆರೆಸಿ ಸೇವಿಸಿದರೆ ಉರಿ ಮೂತ್ರ ಕಡಿಮೆಯಾಗುತ್ತದೆ.
- ಹೊಟ್ಟೆ ನೋವಿಗೆ ಏಲಕ್ಕಿ ಪುಡಿಯನ್ನು ಹಿಪ್ಪಲಿ ಬೇರಿನ ಪುಡಿ ಮತ್ತು ತುಪ್ಪದೊಂದಿಗೆ ಸೇವಿಸುವುದರಿಂದ ಹೊಟ್ಟೆ ನೋವು ಶಮನವಾಗುತ್ತದೆ.
- ನೀವು ರಕ್ತಹೀನತೆಯಿಂದ ಬಳಲುತ್ತಿದ್ದರೆ ಒಂದು ಲೋಟ ಹಾಲಿಗೆ ಒಂದು ಚಮಚ ಏಲಕ್ಕಿ ಪುಡಿ ಮತ್ತು ಒಂದು ಚಮಚ ಅರಿಶಿನ ಪುಡಿಯನ್ನು ಬೆರೆಸಿ ಸಂಜೆ ಮಲಗುವ ಮುನ್ನ ಕುಡಿದರೆ ರಕ್ತಹೀನತೆ ನಿವಾರಣೆಯಾಗುತ್ತದೆ.