ಸಾಮಾನ್ಯವಾಗಿ ನಾವೆಲ್ಲ ಸೋಫಾ ಅಥವಾ ಕುರ್ಚಿ ಮೇಲೆ ಆರಾಮಾಗಿ ವಿರಮಿಸುತ್ತೇವೆ. ಬಹಳ ಸಮಯ ಕುಳಿತೇ ಇರುವುದು ಅನೇಕ ಕಾಯಿಲೆಗಳಿಗೆ ಕಾರಣವಾಗಬಹುದು.
ಪ್ರತಿದಿನ 15 ರಿಂದ 30 ನಿಮಿಷಗಳ ಕಾಲ ನೆಲದ ಮೇಲೆ ಕುಳಿತುಕೊಳ್ಳುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ನಿಮ್ಮ ಕಾಲುಗಳನ್ನು ಅಡ್ಡಲಾಗಿ ನೆಲದ ಮೇಲೆ ಕುಳಿತುಕೊಳ್ಳುವುದು. ನಿಮ್ಮ ದೇಹದ ಎಲ್ಲಾ ಅಂಗಗಳನ್ನು ಮುಕ್ತವಾಗಿ ಚಲಿಸಲು ಅನುವು ಮಾಡಿಕೊಡುತ್ತದೆ.
ನೆಲದ ಮೇಲೆ ಕುಳಿತು ತಿನ್ನುವುದರಿಂದ ದೇಹಕ್ಕೆ ಹೋಗುವ ಪದಾರ್ಥಗಳ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ದೇಹಕ್ಕೆ ಹೆಚ್ಚಿನ ಪೋಷಣೆಯನ್ನು ನೀಡುತ್ತದೆ.
ನೆಲದ ಮೇಲೆ ಕುಳಿತುಕೊಳ್ಳುವುದರಿಂದ ದೇಹದ ನೋವು ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.