ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮನೆಕೆಲಸದವರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಾಹ್ನ 2-45ಕ್ಕೆ ಮುಂದೂಡಿದೆ.

ಕೆ.ಆರ್. ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ರೇವಣ್ಣ ವಕೀಲರ ಮೂಲಕ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅರ್ಜಿ ವಿಚಾರಣೆ ನಡೆಸಿದರು.

ಈ ಪ್ರಕರಣದಲ್ಲಿ ಹೆಚ್. ಡಿ.ರೇವಣ್ಣ ಹಾಗೂ ಸತೀಶ್ ಬಾಬು ಆರೋಪಿಗಳಾಗಿದ್ದಾರೆ. ನ್ಯಾಯಾಧೀಶರು ವಿಚಾರಣೆಯನ್ನು ಮಧ್ಯಾಹ್ನ 2-45ಕ್ಕೆ ಮುಂದೂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!