ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಭಾಷಣದ ಮಧ್ಯೆ ಆಜಾನ್ ಶಬ್ದ ಕೇಳಿ ಭಾಷಣ ನಿಲ್ಲಿಸಿ ಮೌನವಾಗಿದ್ದು, ಮತ್ತೆ ಭಾಷಣ ಮುಂದುವರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಶಿವಾಜಿನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ ಆಜಾನ್ ಸದ್ದು ಕೇಳಿಸಿದೆ. ಆಜಾನ್ ಕೂಗು ಕೇಳಿಸಿದ ಬೆನ್ನಲ್ಲೇ, ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತ ಪ್ರಸಂಗದ ವಿಡಿಯೋ ವೈರಲ್ ಆಗತೊಡಗಿದೆ.
ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ 130 ಹಾಸಿಗೆಗಳುಳ್ಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಆಜಾನ್ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದರು. ಆಜಾನ್ ಮುಗಿಯುತ್ತಿದ್ದಂತೆಯೇ ಸಿದ್ದರಾಮಯ್ಯ ತಮ್ಮ ಭಾಷಣವನ್ನು ಮುಂದುವರಿಸಿದರು.