ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಜೀವನಶೈಲಿ ರೂಢಿಸಿಕೊಂಡಿದ್ದರೂ ಯುವ ಪೀಳಿಗೆಯಲ್ಲಿ ಹೃದಯಾಘಾತದ ಸಂಖ್ಯೆ ಹೆಚ್ಚುತ್ತಿದೆ.
ಬ್ರೆಜಿಲ್‌ನ ಖ್ಯಾತ ಮಾಡೆಲ್ ಲಾರಿಸ್ಸಾ ಬೋರ್ಗೆಸ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಾರಿಸ್ಸಾಗೆ ಬರೀ 33 ವರ್ಷ ವಯಸ್ಸಾಗಿತ್ತು.
ಎರಡು ಬಾರಿ ಹಾರ್ಟ್ ಅಟ್ಯಾಕ್ ಆಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಟುಂಬದವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಬಾಳಿ ಬದುಕಬೇಕಾದವಳು, ಇಷ್ಟು ಬೇಗ ನೀನು ನಮ್ಮನ್ನು ಅಗಲಿ ಹೋಗಿದ್ದೀಯ, ಈ ದುಃಖವನ್ನು ಸಹಿಸಲು ಆಗುತ್ತಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.