ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಇಂದು ಬೆಳಿಗ್ಗೆ ನಗರದ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸೈಬರ್ ಜಾಗೃತಿ’ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಸೀರ್ ಹುಸೇನ್ (58) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
’ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಹಾಗೂ ‘ಡ್ರಗ್ ಫ್ರೀ ಕರ್ನಾಟಕ’ ಅಭಿಯಾನದ ಭಾಗವಾಗಿ ಆಯೋಜಿಸಲಾಗಿದ್ದ 5 ಕಿ.ಮೀ. ಮ್ಯಾರಥಾನ್‌ನಲ್ಲಿ ನೂರಾರು ಪೊಲೀಸರೊಂದಿಗೆ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದ ನಾಸೀರ್ ಹುಸೇನ್ , ಓಟದ ಮಧ್ಯೆ ಹಠಾತ್ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡರು.
ಇದನ್ನೂ ಓದಿ:
ತಕ್ಷಣವೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಮೃತ ನಾಸೀರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪಿಎಸ್‌ಐ ಆಗಿ ಸುದೀರ್ಘ ಮತ್ತು ದಕ್ಷ ಸೇವೆ ಸಲ್ಲಿಸಿದ್ದರು.



