ಪಿಯು ಉತ್ತರ ಪತ್ರಿಕೆ ಮೌಲ್ಯಮಾಪನ ವೇಳೆ ಹೃದಯಾಘಾತ: ಉಪನ್ಯಾಸಕ ಸಾವು

ಹೊಸದಿಗಂತ ವರದಿ, ಬಳ್ಳಾರಿ:

ದ್ವಿತೀಯ ಪಿಯು ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿದ್ದ ಉಪನ್ಯಾಸಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ನಗರದ ಸಂತಜಾನ್ ಪಿಯು ಕಾಲೇಜಿನಲ್ಲಿ ಸಂಭವಿಸಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲುಕಿನ ಕರಡಕಲ್ ಗ್ರಾಮದ ನಿವಾಸಿ, ಮಸ್ಕಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಸಮಾಜ ಶಾಸ್ತ್ರ ಉಪನ್ಯಾಸಕ ಶಂಕರಗೌಡ (44) ಮೃತಪಟ್ಟವರು.

ನಗರದ ಸಂತಜಾನ್ ಪಿಯು ಕಾಲೇಜಿನಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಪ್ರಾರಂಭಗೊಂಡಿದ್ದು,
ಸಮಾಜಶಾಸ್ತ ಉತ್ತರ ಪತ್ರಿಕೆಯ ಮೌಲ್ಯಮಾಪನಾ ಕಾರ್ಯದಲ್ಲಿ ತೊಡಗಿದ್ದರು.

ಬೆ. 12 ಸುಮಾರಿಗೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುವ ಪ್ರಕ್ರಿಯೆ ಶುರುವಾದ, ಸ್ವಲ್ಪ ಹೊತ್ತಿನಲ್ಲೇ ಎದೆ ಕಾಣಿಸಿಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಅಧಿಕಾರಿಗಳು ಕೂಡಲೇ ನಗರದ ಸಿರುಗುಪ್ಪ ರಸ್ತೆಯ ಬಳ್ಳಾರಿ ಹೆಲ್ತ್ ಸೆಂಟರ್ ಆಸ್ಪತ್ರೆಗೆ ಕರೆದೊಯ್ದರೂ, ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದರು ಎಂದು ಡಿಡಿಪಿಯು ಪಾಲಾಕ್ಷ ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!