September 21, 2026
Monday, September 21, 2026
spot_img

ಬಸವ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹೃದಯಾಘಾತ: ಶಬರಿಮಲೆ ಯಾತ್ರೆ ಮುಗಿಸಿ ಬರುತ್ತಿದ್ದ ಮಾಲಾಧಾರಿ ಸಾ*ವು

ಹೊಸದಿಗಂತ ವರದಿ ಕಲಬುರಗಿ:

ಶಬರಿಮಲೆ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಸವ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ.

ಮೃತರನ್ನು ಕಲಬುರಗಿ ಜಿಲ್ಲೆಯ ಮಹಾದೇವ ಅಟ್ಟೂರು (56) ಎಂದು ಗುರುತಿಸಲಾಗಿದೆ. ಬಸಯ್ಯ ಸಾಲಿಮಠ ಗುರುಸ್ವಾಮಿ ಸನ್ನಿಧಾನದ ವತಿಯಿಂದ ಶಬರಿಮಲೆ ಯಾತ್ರೆಗೆ ತೆರಳಿದ್ದ ಭಕ್ತರ ತಂಡವು ವಾಪಸಾಗುವ ವೇಳೆ ಸೆ.20ರಂದು ಯಶವಂತಪುರದಿಂದ ಕಲಬುರಗಿಗೆ ಬರುತ್ತಿದ್ದ ಬಸವ ಎಕ್ಸ್‌ಪ್ರೆಸ್ (17307) ರೈಲಿನಲ್ಲಿ ಈ ಘಟನೆ ನಡೆದಿದೆ.

ರಾತ್ರಿ ಸುಮಾರು 11.30ರ ವೇಳೆಗೆ ರೈಲು ಗುಂತಕಲ್ ಜಂಕ್ಷನ್ ಸಮೀಪ ತಲುಪಿದಾಗ ಮಹಾದೇವ ಅಟ್ಟೂರು ಅವರಿಗೆ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ತಕ್ಷಣ ಸಹಯಾತ್ರಿಕರು ನೆರವಿಗೆ ಧಾವಿಸಿದರೂ, ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಶಬರಿಮಲೆ ಯಾತ್ರೆ ಮುಗಿಸಿ ಮನೆಗೆ ಮರಳುವ ವೇಳೆ ಸಂಭವಿಸಿದ ಈ ದುರ್ಘಟನೆ ಅಯ್ಯಪ್ಪ ಭಕ್ತರಲ್ಲಿ ಹಾಗೂ ಕುಟುಂಬಸ್ಥರಲ್ಲಿ ತೀವ್ರ ದುಃಖ ಮೂಡಿಸಿದೆ. ಘಟನೆಯ ಕುರಿತು ರೈಲ್ವೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !