ವೇದಿಕೆಯಲ್ಲೇ ಹೃದಯಾಘಾತ: ಕುಸಿದು ಬಿದ್ದು ಹಿರಿಯ ಉಪನ್ಯಾಸಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪನ್ಯಾಸಕರೋರ್ವರು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಆಘಾತಕಾರಿ ಘಟನೆ ಐಐಟಿ ಕಾನ್ಪುರದಲ್ಲಿ ನಡೆದಿದೆ.
ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ಸಮೀರ್ ಖಂಡೇಕರ್ (53) ಸಾವನ್ನಪ್ಪಿದವರು.
ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದ ವರು ವೇದಿಕೆಯಲ್ಲಿ ಉಪನ್ಯಾಸ ನೀಡುತ್ತಿರುವ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಮದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!