ಹೃದಯಾಘಾತ: ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ವಿಧಿವಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ (ಕೂರ ತಂಙಳ್) ಸೋಮವಾರ ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕಕ್ಕುಳಂನ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.

ಅವರಿಗೆ 64 ವರ್ಷ ವಯಸ್ಸಾಗಿತ್ತು. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸೈಯ್ಯದ್ ಮದನಿ ದರ್ಗಾ ವಠಾರದಲ್ಲಿ ನೂತನ ಹಾಸ್ಟೆಲ್ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುವವರಿದ್ದರು. ಈ ನಡುವೆ ಅವರು ಹಠಾತ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಟ್ಟುಕ್ಕುಳಂನ ಅವರ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯ ತನಕ ಅಂತಿಮ ದರುಶನಕ್ಕೆ ಅವಕಾಶವಿದ್ದು, ಬಳಿಕ ಉಳ್ಳಾಲಕ್ಕೆ ಕರೆತಂದು ಅಲ್ಲಿ ಸಾರ್ವಜನಿಕರಿಗೆ ಅಂತಿಮ ದರುಶನಕ್ಕೆ ಅವಕಾಶ ನೀಡಲಾಗುತ್ತದೆ. ಬಳಿಕ ಕೂರತ್‌ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ. ಕೂರ ತಂಙಳ್ ನಿಧನಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಯೇನೆಪೋಯ ವಿವಿ ಕುಲಾಧಿಪತಿ ಡಾ.ಯೆನೆಪೊಯ ಅಬ್ದುಲ್ಲಾ ಕುಂಞಿ ಸಹಿತ ಅನೇಕರು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!