ಹೊಸದಿಗಂತ ಡಿಜಿಟಲ್ ಡೆಸ್ಕ್:
ಡ್ಯಾನ್ಸ್ ಮಾಡುವಾಗಲೇ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ.
ಮಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಹಾರ್ಟ್ ಅಟ್ಯಾಕ್‌ನಿಂದ ಉಸಿರು ಬಿಟ್ಟ ನತದೃಷ್ಟ ಯುವಕ. ಮಹಮ್ಮದ್ ಪೈಗಂಬರ್ ತನ್ನ ಸಂಬಂಧಿಕರ ಮದುವೆಯಲ್ಲಿ ಸ್ನೇಹಿತರ ಜೊತೆ ಸಂಗೀತಕ್ಕೆ ಸಖತ್ ಸ್ಟೆಪ್ಸ್ ಹಾಕುತ್ತಿದ್ದ. ಆದರೆ ಇದ್ದಕ್ಕಿದ್ದಂತೆ ಯುವಕ ಕುಸಿದು ಬಿದ್ದಿದ್ದು, ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.
ಪೈಗಂಬರ್ ಹೃದಯಾಘಾತ ಸ್ನೇಹಿತರು, ಸಂಬಂಧಿಕರು ಬೆಚ್ಚಿ ಬೀಳುವಂತೆ ಮಾಡಿದೆ. ಮೃತ ಯುವಕ ಸಾವಿಗೂ ಮುನ್ನ ಖುಷಿಯಾಗಿ ಡ್ಯಾನ್ಸ್ ಮಾಡುತ್ತಿದ್ದ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.