ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನಿಯರ್ ಎನ್ ಟಿಆರ್ ಅಭಿನಯದ ‘ದೇವರ’ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.
ಇದೇ ವೇಳೆ ಖುಷಿಯಿಂದ ಸಿನಿಮಾ ವೀಕ್ಷಿಸುತ್ತಿದ್ದ ಜೂನಿಯರ್ ಎನ್ ಟಿಆರ್ ಅಭಿಮಾನಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಮಸ್ತಾನ್ ವಲಿ(35) ಮೃತಪಟ್ಟವರು ಎಂದು ಹೇಳಲಾಗಿದೆ. ‘ದೇವರ’ ಸಿನಿಮಾ ವೀಕ್ಷಿಸುವಾಗ ಕುಸಿದು ಬಿದ್ದ ಮಸ್ತಾನ್ ವಲಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅವರು ಈಗಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.