ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಹೆಚ್ಚಾಗ್ತಿದೆ ಹೃದಯಾಘಾತ, 26 ವರ್ಷದ ಟೆಕ್ಕಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೃದಯಘಾತದಿಂದ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.‌

ಸಮರ್ಥ್ (26) ಮೃತ ಸಾಫ್ಟ್‌ವೇರ್ ಇಂಜಿನಿಯರ್. ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್‌ ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳುಗಳಿಂದ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಸಮರ್ಥ್ ಭಾನುವಾರ ಬೆಳಗ್ಗೆಯವರೆಗೂ ಕೆಲಸ ಮಾಡಿ ಮಲಗಿದ್ದರು. ಸಂಜೆ ಮೇಲೆದ್ದು ನೀರು ಕುಡಿದ ಸಮರ್ಥ್ ತಕ್ಷಣವೇ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ.

ಕೂಡಲೇ ಸಮರ್ಥ್ ತಾಯಿ ಪತಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದು ಮನೆಗೆ ಬಂದ ವೈದ್ಯರು ಸಮರ್ಥ್ ತಪಾಸಣೆ ನಡೆಸಿದ್ದಾರೆ. ಅಷ್ಟರಲ್ಲಿ ಹೃದಯಾಘಾತದಿಂದ ಸಮರ್ಥ್ ಕೊನೆಯುಸಿರೆಳೆದಿದ್ದರು. ವಯಸ್ಸಿಗೆ ಬಂದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!