ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮೀರಟ್‌ನಲ್ಲಿ ಸಹೋದರಿಯ ಮೆಹೆಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವತಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ.
ಮೃತಳನ್ನು ರಿಮ್ಶಾ (18) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸಹೋದರಿಯ ಮೆಹಂದಿ ಕಾರ್ಯಕ್ರಮವಿತ್ತು. ಅದರಲ್ಲಿ ರಿಮ್ಶಾ ಡ್ಯಾನ್ಸ್ ಮಾಡಿದ್ದಾಳೆ. ನಂತರ ಏಕಾಏಕಿ ಕುಸಿದು ಬಿದ್ದಿದ್ದಾಳೆ.
ರಿಮ್ಶಾ ಬೀಳುತ್ತಿದ್ದಂತೆಯೇ ಕಾರ್ಯಕ್ರಮ ಬಂದ ಕೆಲವರು ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಆಕೆಗೆ ಹೃದಯಾಘಾತವಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮದುವೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಇದೀಗ ನೀರವ ಮೌನ ಆವರಿಸಿದೆ.