ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಯುವಪೀಳಿಗೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪುತ್ತೂರಿನಲ್ಲಿ ಹೃದಯಾಘಾತಕ್ಕೆ ನವವಿವಾಹಿತೆ ಬಲಿಯಾಗಿದ್ದಾರೆ.
ಪುತ್ತೂರಿನ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ಘಟನೆ ನಡೆದಿದ್ದು, ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪುಷ್ಪಾ ಮೃತಪಟ್ಟಿದ್ದಾರೆ.
ಪುಷ್ಪಾಗೆ ನಿನ್ನೆ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.