ಜೈಲಿನಲ್ಲಿದ್ದ ಮುರುಘಶ್ರೀಗೆ ಹೃದಯ ಸಮಸ್ಯೆ : ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಇದೀಗ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಜೈಲಿನಲ್ಲಿರುವ ಮುರುಘಾ ಮಠದ ಮುರುಘ ಶ್ರೀಗಳಿಗೆ ಹೃದಯ ಸಮಸ್ಯೆ ಎದುರಾಗಿದೆ.
ಪೋಕ್ಸೋ ಕೇಸ್ ನಡಿ ನ್ಯಾಯಾಂಗ ಬಂಧನದಲ್ಲಿರುವ ಸ್ವಾಮೀಜಿಗೆ ಹೃದಯ ಸಮಸ್ಯೆ ಎದುರಾಗಿದ್ದು, ಮುರುಘಾ ಶ್ರೀಗಳ ಪರ ವಕೀಲರ ಮನವಿ ಮೇರೆಗೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಕೋರ್ಟ್ ಸೂಚನೆ ನೀಡಿದೆ.
ಕೊರೋನರಿ ಆಂಜಿಯೋಗ್ರಾಂಗೆ ಶ್ರೀಗಳ ಪರ ವಕೀಲರು ಮನವಿ ಮಾಡಿದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಪೊಲೀಸ್ ವ್ಯಾನ್ ನಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶ್ರೀಗಳನ್ನು ಕರೆದುಕೊಂಡು ಹೋಗಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!