ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ವಿವೇಕ್ ವಿಹಾರ್ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯಲ್ಲಿ ಏಳು ನವಜಾತ ಶಿಶುಗಳು ಬೆಂಕಿಯಲ್ಲಿ ಸಾವನ್ನಪ್ಪಿದ ನಂತರ ದ್ರೌಪದಿ ಮುರ್ಮು ಭಾನುವಾರ ಸಂತಾಪ ಸೂಚಿಸಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿದ ರಾಷ್ಟ್ರಪತಿಗಳು, “ದೆಹಲಿಯ ವಿವೇಕ್ ವಿಹಾರ್ನಲ್ಲಿರುವ ಆಸ್ಪತ್ರೆಯಲ್ಲಿ ಬೆಂಕಿಯಿಂದ ಅನೇಕ ಮಕ್ಕಳು ಸಾವನ್ನಪ್ಪಿದ ಸುದ್ದಿ ಹೃದಯ ವಿದ್ರಾವಕವಾಗಿದೆ, ಈ ಆಘಾತವನ್ನು ಭರಿಸುವ ಶಕ್ತಿಯನ್ನು ದೇವರು ದುಃಖತಪ್ತ ಪೋಷಕರು ಮತ್ತು ಸಂಬಂಧಿಕರಿಗೆ ನೀಡಲಿ ಎಂದು ಹೇಳಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿರುವ ಇತರ ಮಕ್ಕಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ತಿಳಿಸಿದ್ದಾರೆ.