ಹೊಸದಿಗಂತ ಡಿಜಿಟಲ್ ಡೆಸ್ಕ್:
12 ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ರೈಲು ಹಳಿ ಬಳಿ ಎಸೆದು ಪರಾರಿಯಾಗಿರುವ ಘಟನೆ ಹಾಸನ ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ.
ಕುಶಾಲ್ ಗೌಡ (12) ಎಂಬ ಬಾಲಕನ ಮೃತದೇಹ ರೈಲ್ವೆ ಹಳಿ ಬಳಿಯ ಪೊದೆಯಲ್ಲಿ ಪತ್ತೆಯಾಗಿದೆ.
ಮಕ್ಕಳೊಂದಿಗೆ ಆಟವಾಡಲು ಹೋದ ಬಾಲಕ ನಾಪತ್ತೆಯಾಗಿದ್ದ. ಚಿರತೆ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದ್ದರಿಂದ ಶೋಧ ನಡೆಸಲಾಯಿತು. ಆದರೆ ಆತ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಂದು ರೈಲ್ವೆ ಹಳಿಯ ಬಳಿಯ ಪೊದೆಯಲ್ಲಿ ಕುಶಾಲ್ ಗೌಡ ಶವ ಪತ್ತೆಯಾಗಿದೆ. ಈ ಕುರಿತು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.