ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನದಲ್ಲಿ ಬಾತ್ರೂಂನಲ್ಲಿ ಇದ್ದಾಗಲೇ ಯುವತಿಗೆ ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಇಂದು ನಡೆದಿದೆ.
ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ.
ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟೊತ್ತಿಗಾಗಲೇ ಸಂಧ್ಯಾ ಸಾವನ್ನಪ್ಪಿದ್ದಾಳೆ.