ರಿಪ್ಪನ್‌ಪೇಟೆಯಲ್ಲಿ ಮನಕಲಕುವ ಘಟನೆ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ

ಹೊಸದಿಗಂತ ವರದಿ ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗವಟೂರು ಹೊಳೆ ಸಮೀಪದ ಬಿಳಕಿ ಗ್ರಾಮದ ತೆಂಕೋಲ್ ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಮಗುವನ್ನು ಚೀಲದಲ್ಲಿ ಕಟ್ಟಿ, ಬಾಯಿಗೆ ಫೀಡಿಂಗ್ ಬಾಟಲ್ ಇಟ್ಟು ಹೋಗಿರುವ ಅಮಾನವೀಯ ಘಟನೆ ನಡೆದಿದೆ. ಭಾನುವಾರ ರಾತ್ರಿ ಬಸ್ ನಿಲ್ದಾಣದ ಬಳಿ ಸಾಗುತ್ತಿದ್ದ ದಾರಿಹೋಕರಿಗೆ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ, ಚೀಲದೊಳಗೆ ನವಜಾತ ಹೆಣ್ಣು ಮಗು ಇರುವುದನ್ನು ಕಂಡು ಬೆಚ್ಚಿಬಿದ್ದರು. ಕೂಡಲೇ ರಿಪ್ಪನ್‌ಪೇಟೆ … Continue reading ರಿಪ್ಪನ್‌ಪೇಟೆಯಲ್ಲಿ ಮನಕಲಕುವ ಘಟನೆ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ