ಕೇರಳಕ್ಕೆ ತಾಪ ಕೋಪ: ಮೂರು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಅತೀ ಹೆಚ್ಚು ತಾಪಮಾನ ಕಾಣಿಸಿಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಕೋಝಿಕ್ಕೋಡ್, ಕಣ್ಣೂರು ಮತ್ತು ತಿರುವನಂತಪುರಂ ಜಿಲ್ಲೆಗಳ ಜನತೆ ಗರಿಷ್ಠ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಸೋಮವಾರ ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯೆಸ್ ದಾಖಲಾಗಲಿದೆ. ಈ ಹಿನ್ನೆಲೆಯಲ್ಲಿ ಬಿಸಿಲಿಗೆ ಮೈಯೊಡ್ಡುವ ಮಂದಿ ಸನ್ ಬರ್ನ್ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇದೆ. ಬೆಳಿಗ್ಗೆ 11 ರಿಂದ ಅಪರಾಹ್ನ 3 ಗಂಟೆಯವರೆಗೆ ನಾಗರಿಕರು ವಿಶೇಷ ಕಾಳಜಿ ವಹಿಸಬೇಕು. ನಿರ್ಜಲೀಕರಣವನ್ನು ತಪ್ಪಿಸಲು ಸಾಕಷ್ಟು ನೀರು ಕುಡಿಯಬೇಕು, ಈ ನಡುವೆ ರೋಗಿಗಳು, ವೃದ್ಧರು, ಗರ್ಭಿಣಿಯರು, ಮಕ್ಕಳು, ಅಂಗವಿಕಲರು ಮುಂತಾದವರು ಹೆಚ್ಚು ಜಾಗರೂಕರಾಗಿರಬೇಕು ಎಂದು ಆರೋಗ್ಯ ಇಲಾಖೆ ಕೂಡಾ ಮುನ್ನೆಚ್ಚರಿಕೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!