ಕರ್ನಾಟಕ, ಕೇರಳ ಸಹಿತ ಹಲವು ರಾಜ್ಯಗಳಲ್ಲಿ Heat wave: ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹವಾಮಾನ ಮುನ್ನೋಟದಲ್ಲಿ Heat wave ವಿಷಯವಾಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಲರ್ಟ್ ಘೋಷಣೆ ಮಾಡಿದೆ.
ಭಾರತದ ಪೂರ್ವ ಹಾಗೂ ದಕ್ಷಿಣ ಪ್ರದೇಶಗಳಲ್ಲಿ Heat wave ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ಕರ್ನಾಟಕ, ಗೋವಾ, ಕೇರಳ, ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಬಿಹಾರ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ, ಹೆಚ್ಚಿನ ಹ್ಯುಮಿಡಿಟಿ ಮಟ್ಟಗಳು ಉಲ್ಬಣಗೊಳ್ಳಲಿವೆ .ಮುಂದಿನ 5 ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಕೇಂದ್ರದಲ್ಲಿ ತಾಪಮಾನ 40 ಡಿಗ್ರಿ ಸೆಲ್ಷಿಯಸ್ ತಲುಪಿದಾಗ ಅದನ್ನು ಅಧಿಕೃತವಾಗಿ Heat wave ಎಂದು ಪರಿಗಣಿಸಲಾಗುತ್ತದೆ. ಕರಾವಳಿ ಪ್ರದೇಶಗಳಲ್ಲಿ 37 ಡಿಗ್ರಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ 30 ಡಿಗ್ರಿ ಸೆಲ್ಷಿಯಸ್ ತಲುಪಿದರೆ ಅದನ್ನು Heat wave ಎಂದು ಪರಿಗಣಿಸಲಾಗುತ್ತದೆ. ಸಾಮಾನ್ಯವಾಗಿ ದಾಖಲಾಗುವುದಕ್ಕಿಂತ 4.5 notches ಹೆಚ್ಚಳವಾದರೆ ಅದನ್ನು Heat wave ಎಂದೂ 6.4 notches ಹೆಚ್ಚಳವಾದರೆ ಅದನ್ನು ತೀವ್ರ ಉಷ್ಣಹವೆ ಎಂದು ಪರಿಗಣಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!