ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರಂಟಿ ಯೋಜನೆಗಳಿಗೆ ದಲಿತರ ಅಭಿವೃದ್ಧಿ ಮೀಸಲಿಟ್ಟಿರುವ ಅನುದಾನ ಬಳಕೆ ಮಾಡುತ್ತಿದೆ ಎಂದು ಇಂದು ನಡೆದ ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷಗಳು ಆರೋಪಿಸಿವೆ.
ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಇಲ್ಲಿ ಬಹಳ ದುರುಪಯೋಗ ಆಗುತ್ತಿದೆ. ದಲಿತ ಸಮುದಾಯಗಳಿಗಾಗಿ 42 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿತ್ತು. ಇದರಲ್ಲಿ ಇಲಾಖೆಗಳಿಗೆ 21 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ನಿಗಮ ಮಂಡಳಿಗಳಿಗೆ ಹಣ ಬಂದರೂ ಅದು ಈ ಸಮುದಾಯಗಳಿಗೆ ತಲುಪುತ್ತಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಮಹದೇವ ಪ್ರಸಾದ್, ಗ್ಯಾರಂಟಿ ಯೋಜನೆಗಳಿಗೆ ಈ ಹಣವನ್ನು ಬಳಸುತ್ತಿಲ್ಲ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲು ಸಾಧ್ಯವಿಲ್ಲ. ಈ ಹಣವನ್ನು ಆ ಸಮುದಾಯದ ಜನರಿಗೆ ಮಾತ್ರ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು.