September 28, 2026
Monday, September 28, 2026
spot_img

HEAT WAVE | ರಾಜ್ಯದಲ್ಲಿ ಹೆಚ್ಚಾಗ್ತಿದೆ ರಣಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ರಣಬಿಸಿಲು ಹೆಚ್ಚಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಡೆಯಲಾರದಂತಹ ಬಿಸಿಲು ಜನರ ನಿದ್ದೆಗೆಡಿಸಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 35 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಮಳೆಯ ಸದ್ದೂ ಇಲ್ಲದಂತಾಗಿದೆ.

ಇದೇ ವೇಳೆ ದಕ್ಷಿಣ-ಪೂರ್ವ ದಿಕ್ಕಿನಿಂದ ಬೀಸುತ್ತಿರುವ ಗಾಳಿಗಳು ಬಿಸಿಯನ್ನು ಹೆಚ್ಚಿಸುವುದರ ಜೊತೆಗೆ ಮಧ್ಯಮ ಮಟ್ಟದ ಆರ್ದ್ರತೆಯನ್ನು ತರಿಸುತ್ತಿವೆ. ಇದರಿಂದ ಹಗಲು ವೇಳೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ರಾತ್ರಿ ಸಮಯದಲ್ಲೂ ತಂಪಿನ ಅನುಭವ ಕಡಿಮೆಯಾಗಿದೆ.

ರಾಜ್ಯದ ಇತರ ಭಾಗಗಳಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಕಂಡುಬರುತ್ತಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ.

Must Read