March 11, 2026
Wednesday, March 11, 2026
spot_img

WEATHER | ಕರಾವಳಿಯಲ್ಲಿ ಹೆಚ್ಚಾಯ್ತು ಶಾಖಗಾಳಿ, ಇನ್ನೆರಡು ದಿನ ಯೆಲ್ಲೋ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚಳಿಗಾಲ ಮುಗಿದಿದೆ. ಬೇಸಿಗೆ ಲಕ್ಷಣಗಳು ಆರಂಭ ಆಗಿದ್ದು, ಜನ ಈಗಾಗಲೇ ಹೈರಾಣಾಗಿದ್ದಾರೆ.

ಶಾಖ ಗಾಳಿ ಹಾಗೂ ಆರ್ದ್ರತೆಯ ಹಿನ್ನೆಲೆ ಫೆಬ್ರವರಿ 17 ಹಾಗೂ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !