Saturday, April 1, 2023

Latest Posts

ನ್ಯೂಜಿಲೆಂಡ್ ನಲ್ಲಿ ಭಾರೀ ಭೂಕಂಪ, ಸುನಾಮಿ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯೂಜಿಲೆಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ್ದು, 7.1 ತೀವ್ರತೆಯ ಭೂಕಂಪ ಇದಾಗಿದೆ.

ಜಿಯೋಲಾಜಿಕಲ್ ಸರ್ವೆ ಈ ಬಗ್ಗೆ ಮಾಹಿತಿ ನೀಡಿದ್ದು, ಭೂಕಂಪವು 10 ಕಿ.ಮೀ ಆಳದಲ್ಲಿ ಆಗಿದೆ ಎನ್ನಲಾಗಿದೆ. ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾದ ಕಾರಣ ಇದು ಭೂಕಂಪದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಯುಎಸ್ ಸುಮಾಮಿ ಎಚ್ಚರಿಕೆ ವ್ಯವಸ್ಥೆ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!