ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಕೋಲ್ಕತ್ತಾದ ಉಲ್ತದಂಗ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 10 ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ ಇಂದು ಬೆಳಗ್ಗೆ 7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ ಬೆಂಕಿಯ ಕಾರಣ ಮತ್ತು ಉಂಟಾದ ಹಾನಿಯ ವಿಸ್ತರಣೆಯನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಹೇಳಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.