ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಭಾರಿ ಬೆಂಕಿ ಅವಘಡ ಸಂಭವಿಸಿ, 16 ಮನೆಗಳು ಸುಟ್ಟು ಭಸ್ಮವಾಗಿರುವ ದುರ್ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಇಲ್ಲಿನ ಬಾರಾಮುಲ್ಲಾ ಜಿಲ್ಲೆಯ ನೂರ್ಬಾಗ್ ಪ್ರದೇಶದಲ್ಲಿ ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಮನೆಯೊಂದರಲ್ಲಿ ಎಲ್ ಪಿಜಿ ಅನಿಲ ಸೋರಿಕೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿ ಎಲ್ಲೆಡೆ ಪಸರಿಸಿ 16 ಮನೆಗಳು ಸುಟ್ಟು ಹೋಗಿದೆ.
ಅಗ್ನಿಶಾಮಕ ತಂಡ ಸ್ಥಳಕ್ಕೆ ಆಗಮಿಸುವ ವೇಳೆಗಾಗಲೇ 12ಕ್ಕೂ ಅಧಿಕ ಮನೆಗಳಿಗೆ ಬೆಂಕಿ ತಗುಲಿತ್ತು. ಕಿರಿದಾದ ಮಾರ್ಗಗಳಿಂದಾಗಿ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪುವುದು ಕಷ್ಟಕರವಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ತನಿಖೆ ಕಾರ್ಯ ಮುಂದುವರೆದಿದೆ.