ರೈಲು ಬೋಗಿಯಲ್ಲಿ ಭಾರೀ ಬೆಂಕಿ, ಮಕ್ಕಳೂ ಸೇರಿ 7 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾಚಿಯಿಂದ ಲಾಹೋರ್‌ಗೆ ಹೊರಟಿದ್ದ ರೈಲಿನ ಬೋಗಿಯಲ್ಲಿ ಭಾರೀ ಬೆಂಕಿ ಕಾಣಿಸಿದ್ದು, ಮೂವರು ಮಕ್ಕಳು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ.

ಸಿಂಧ್ ಪ್ರಾಂತ್ಯದ ರೈಲಿನ ಬಿಸಿನೆಸ್ ಕ್ಲಾಸ್‌ನ ಬೋಗಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿದ್ದು ಯಾಕೆ ಎನ್ನುವ ಕಾರಣ ಇನ್ನೂ ತಿಳಿದುಬಂದಿಲ್ಲ. ಬೋಗಿಯಲ್ಲಿ ಬೆಂಕಿ ಕಾಣುತ್ತಿದ್ದಂತೆ ಯಾರೂ ಎಲ್ಲಿಗೂ ತೆರಳಲು ಆಗದೇ ಮೃತಪಟ್ಟಿದ್ದಾರೆ.

ಈ ಘಟನೆಗೆ ಕಾರಣ ತಿಳಿದುಬಂದಿಲ್ಲ, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಬೆಂಕಿಯ ವಿಷಯ ತಿಳಿಯುತ್ತಿದ್ದಂತೆಯೇ ರೈಲನ್ನು ತಾಂಡೋ ಮಸ್ತಿ ಖಾನ್ ಸ್ಟೇಷನ್ ಬಳಿ ನಿಲ್ಲಿಸಲಾಗಿದೆ. ತಕ್ಷಣವೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಗಿದೆ, ಬೆಂಕಿ ನಂದಿಸಿದರೂ ಜೀವಗಳನ್ನು ಉಳಿಸಲು ಸಾಧ್ಯವಾಗಿಲ್ಲ!

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!