ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಮಹಗಾಂವ್ ಪಟ್ಟಣದಲ್ಲಿ ನೂತನ ಶಾಸಕನ ವಿಜಯೋತ್ಸವ ಸಂದರ್ಭದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಚಂದಗಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಾಜಿ ಪಾಟೀಲ್ ಅವರಿಗೆ ಆರತಿ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಆರತಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಲಾಲವನ್ನು ಆರತಿ ಮೇಲೆ ಸುರಿಯಲಾಗಿದೆ. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅವಘಡದಲ್ಲಿ ಶಾಸಕ ಸೇರಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.