spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, January 17, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬ್ರೆಜಿಲ್‌ನಲ್ಲಿ ಭಾರೀ ಪ್ರವಾಹ: 12 ಸಾವು, ನೆಲೆ ಕಳೆದುಕೊಂಡಿದ್ದು 17 ಸಾವಿರ ಮಂದಿ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬ್ರೆಜಿಲ್‌ನ ಆಗ್ನೇಯ ರಾಜ್ಯದಲ್ಲಿ ಭಾರೀ ಪ್ರವಾಹ ಉಂಟಾಗಿದ್ದು, ವಾರದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ.
ಬ್ರೆಜಿಲ್‌ನ ಮಿನಾಸ್ ಗೆರೈಸ್ ರಾಜ್ಯದಲ್ಲಿ ಭೂಕುಸಿತ ಉಂಟಾಗಿದ್ದು,12  ಮಂದಿ ಮೃತಪಟ್ಟಿದ್ದಾರೆ. ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಣೆಕಟ್ಟೆಗಳು ತುಂಬಿವೆ.
ಪ್ರವಾಹದಿಂದಾಗಿ ಈಗಾಗಲೇ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, 17 ಸಾವಿರ ಮಂದಿ ನೆಲೆ ಕಳೆದುಕೊಂಡಿದ್ದಾರೆ.
ಆಗ್ನೇಯ ರಾಜ್ಯದಲ್ಲಿ ಒಂದೇ ಕುಟುಂಬದ ಐದು ಮಂದಿ ಮೃತಪಟ್ಟಿದ್ದಾರೆ. ಸಾವೊ ಗೊನಾಲೊ ಡೊ ರಿಯೊ ಅಬೈಕ್ಸೋದಲ್ಲಿ 10 ವರ್ಷದ ಬಾಲಕಿ ಮನೆಯಲ್ಲಿ ಮಲಗಿದ್ದಾಗ ಗೋಡೆ ಬಿದ್ದು ಮೃತಪಟ್ಟಿದ್ದಾಳೆ. ಕಾರ್ಟಿಂಗಾದಲ್ಲಿ ಭೂಕುಸಿತಕ್ಕೆ ಮೂರು ಮಂದಿ ಮೃತಪಟ್ಟಿದ್ದಾರೆ. ಎರ್ವಾಲಿಯಾದಲ್ಲಿ ಬಾರ್‌ನಲ್ಲಿದ್ದ ಯುವಕನ ಮೇಲೆ ಗೋಡೆ ಕುಸಿತು ಆತ ಮೃತಪಟ್ಟಿದ್ದಾನೆ ಎಂದು ನಾಗರಿಕ ರಕ್ಷಣಾ ಪ್ರಾಧಿಕಾರ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss