April 7, 2026
Tuesday, April 7, 2026
spot_img

ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭಾರೀ ಪ್ರವಾಹ: ಜನರ ಸಹಾಯಕ್ಕೆ 24/7 ಕಂಟ್ರೋಲ್‌ ರೂಮ್‌ ಓಪನ್!

ಹೊಸದಿಗಂತ ಡಿಜಿಟಲ್ ಡೆಸ್ಕ್

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭೂಕುಸಿತ ಸಂಭವಿಸಿ, ಸಾವಿನ ಸಂಖ್ಯೆ 14ಕ್ಕೆ ಏರಿಕೆಯ ಗಿದ್ದು, ಪಈ ಹಿನ್ನೆಲೆ ಸಾರ್ವಜನಿಕರ ಸಹಾಯಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ 24/7 ಕಂಟ್ರೋಲ್‌ ರೂಮ್‌ ತೆರೆದಿದ್ದಾರೆ.

ಈಗಾಗಲೇ‌ ಪರಿಸ್ಥಿತಿಯನ್ನು ಕಂಟ್ರೋಲ್‌ ರೂಮ್‌ (Control Room) ಮೂಲಕ ಮೇಲ್ವಿಚಾರಣೆ ಮಾಡುತ್ತಿದ್ದು, ಸೋಮವಾರ (ಅ.6) ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಶನಿವಾರ ರಾತ್ರಿ ಸುರಿದ ಹಠಾತ್‌ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಬಂಗಾಳದ ಉತ್ತರ ಮತ್ತು ದಕ್ಷಿಣದ ಹಲವಾರು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿವೆ. ಇದು ನಿಜಕ್ಕೂ ದುಃಖಕರವಾಗಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಬೇಸರ ಹೊರಹಾಕಿದ್ದಾರೆ.

ಉತ್ತರ ಬಂಗಾಳದಲ್ಲಿ 12 ಗಂಟೆಗಳಲ್ಲಿ 300 MMಗೂ ಅಧಿಕ ಮಳೆಯಾಗಿದೆ. ಇದರಿಂದ ಸಂಕೋಶ್ ನದಿ, ಭೂತಾನ್ ಮತ್ತು ಸಿಕ್ಕಿಂನಿಂದ ನದಿ ನೀರಿನ ಹರಿವಿನಲ್ಲೂ ಏರಿಕೆಯಾಗಿದೆ. ಹಠಾತ್ ಪ್ರವಾಹದಿಂದ ನಮ್ಮ ಕೆಲ ಸಹೋದರ-ಸಹೋದರಿಯರನ್ನ ಕಳೆದುಕೊಂಡಿದ್ದೇವೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ ತಿಳಿಸುತ್ತೇನೆ. ಅಲ್ಲದೇ ಆ ಕುಟುಂಬಗಳಿಗೆ ಅಗತ್ಯ ಸಹಾಯ ನೀಡುವುದಾಗಿ ತಿಳಿಸಿದ್ದಾರೆ.

ಡಾರ್ಜಲಿಂಗ್‌ನಲ್ಲಿ ಸಂಭವಿಸಿದ ಈ ವಿಪತ್ತು ಹಿಮಾಲಯ ರಾಜ್ಯವಾದ ಸಿಕ್ಕಿಂ ಜೊತೆಗಿನ ಸಂಪರ್ಕ ಕಡಿತಗೊಳಿಸಿದೆ. ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು, ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !