Wednesday, August 10, 2022

Latest Posts

ಜರ್ಮನಿಯಲ್ಲಿ ಭಾರೀ ಪ್ರವಾಹ: ಮೃತರ ಸಂಖ್ಯೆ 170ಕ್ಕೆ ಏರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಜರ್ಮನಿ ಸೇರಿದಂತೆ ಹಲವು ಯೂರೋಪಿಯನ್ ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಮೃತಪಟ್ಟವರ ಸಂಖ್ಯೆ 170 ಕ್ಕೆ ಏರಿದೆ. ಅನೇಕ ಮನೆಗಳು ಕುಸಿದಿದ್ದು, ರಸ್ತೆಗಳು ಜಲಾವೃತಗೊಂಡಿದೆ.

ಕೆಲವು ಜಾಗಗಳಲ್ಲಿ ಸಂವಹ ಮಾಡಲಾಗದೇ ಅಂತಹ ಪ್ರದೇಶಗಳಿಗೆ ತಲುಪಲು ಸಾಧ್ಯವಾಗಿಲ್ಲ. ನೂರಾರು ಜನರು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಪಶ್ಚಿಮ ಜರ್ಮನಿಯ ಸ್ಟೈನ್ ಬಕ್ತಾಲ್ ಅಣೆಕಟ್ಟು ಅಪಾಯದಲ್ಲಿದೆ. ಸುಮಾರು 4500 ಜನರನ್ನು ಮನೆಗಳಿಂದ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆಯಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಮಟ್ಟ ಕಡಿಮೆ ಆಗಿದೆ. ಇದರಿಂದಾಗಿ ಪ್ರವಾಹದಲ್ಲಿ ಕೊಚ್ಚಿ ಹೋದ ವಾಹನಗಳು, ಶವಗಳು ಪತ್ತೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss