Sunday, August 14, 2022

Latest Posts

ಸಿಡಿಲು ಬಡಿತ: ಏಳು ಮಕ್ಕಳು ಸೇರಿದಂತೆ 18 ಮಂದಿ ದಾರುಣ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜಸ್ಥಾನದ ಜೈಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 7 ಮಕ್ಕಳು ಸೇರಿದಂತೆ 18 ಜನರು ಮೃತಪಟ್ಟಿದ್ದಾರೆ. ಆರು ಮಕ್ಕಳು ಸೇರಿದಂತೆ 21 ಜನರು ಗಾಯಗೊಂಡಿದ್ದಾರೆ.

ರಾಜಸ್ಥಾನದಲ್ಲಿ ವರುಣನ ಅಬ್ಬರ ಜೋರಾಗಿದ್ದು,  ಜೈಪುರ, ಝಲವಾಡ್, ದೋಪ್ ಪುರ ಜಿಲ್ಲೆಗಳಲ್ಲಿ ಮಳೆಯ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ಮೂರು ಜಿಲ್ಲೆಗಳಲ್ಲಿ ಸಿಡಿಲ ಬಡಿತಕ್ಕೆ 18 ಜನ ದಾರುಣವಾಗಿ ಮೃತಪಟ್ಟಿದ್ದಾರೆ.

ಕೋಟಾದ ಗಾರ್ಡಾ ಗ್ರಾಮದಲ್ಲಿ ತಮ್ಮ ಜಾನುವಾರುಗಳೊಂದಿಗೆ ಆಶ್ರಯ ಪಡೆಯುತ್ತಿದ್ದ ಮರಕ್ಕೆ ಸಿಡಿಲು ಬಡಿದು ರಾಧೆ ಬಂಜಾರಾ ಅಲಿಯಾಸ್ ಬಾವ್ಲಾ (12), ಪುಖ್ರಾಜ್ ಬಂಜಾರಾ (16), ವಿಕ್ರಮ್ (16) ಮತ್ತು  ಅಖ್ರಾಜ್ (13) ಸ್ಥಳದಲ್ಲಿಯೇ  ಮೃತಪಟ್ಟರು. ಜಾನುವಾರಗಳು ಸಹ ಮೃತಪಟ್ಟಿವೆ.

ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮೃತಪಟ್ಟವರ ಕುಟುಂಬಗಳಿಗೆ  5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss