ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿರಸಿಯಲ್ಲಿ ಭಾರೀ ಮಳೆ: ತಗ್ಗು ಪ್ರದೇಶಗಳು ಜಲಾವೃತ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ವರದಿ,ಕಾಸರಗೋಡು:

ಶಿರಸಿಯಲ್ಲಿ ಗುರುವಾರವಿಡೀ ಭಾರಿ ಮಳೆಯಾಗಿದ್ದು, ಕೆಲವು ಮನೆಗಳಿಗೆ ಹಾನಿಯಾಗಿದೆ. ನಗರದಲ್ಲಿ ತಗ್ಗು ಪ್ರದೇಶದ ಮನೆಗಳು ಜಲಾವೃತವಾಗಿವೆ.
ತಾಲೂಕಿನಲ್ಲಿ ಸುರಿದ ಕುಂಭದ್ರೋಣ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಮುಂಜಾನೆಯಿಂದ ಬಿಟ್ಟೂಬಿಡದೆ ಮಳೆ ಸುರಿಯುತ್ತಿರುವ ಕಾರಣ ನಗರದಲ್ಲಿ ತಗ್ಗು ಪ್ರದೇಶಗಳ ಮನೆಗಳಿಗೆ ಜಲದಿಗ್ಭಂದನವಾಗಿದೆ. ಪ್ರಗತಿನಗರ, ವಿಶಾಲನಗರ, ಬಸವೇಶ್ವರ ಕಾಲೋನಿ, ಲಯನ್ಸ್ ನಗರದಲ್ಲಿ ನೀರಿನ ಅಬ್ಬರ ಹೆಚ್ಚಿದ್ದು, ಸಾರ್ವಜನಿಕರ ಪರದಾಟ ಹೆಚ್ಚಿದೆ.
ಮನೆಗಳಿಗೆ ಹಾನಿ:
ದೇವನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಳಗಿನಕೇರಿಯ ದೇವಿ ಶಿವು ಗೌಡ ಅವರ ಮನೆಯ ಮೇಲ್ಛಾವಣಿ ಕುಸಿದಿದ್ದು, ೧೨ ಸಾವಿರ ರೂ. ಹಾನಿಯಾಗಿದೆ. ಹುಲದೇವನಸರದ ವಿಶ್ವೇಶ್ವರ ಶಾಸ್ತ್ರಿ ಅವರ ಮನೆಯ ಮೇಲೆ ಮರ ಬಿದ್ದ ಕಾರಣ ೪೦ ಸಾವಿರ ರೂ. ಹಾನಿ ಅಂದಾಜಿಸಲಾಗಿದೆ. ಅಂಡಗಿಯ ರಮೇಶ ಚನ್ನಯ್ಯ ಅವರ ವಾಸದ ಮನೆಯ ಗೋಡೆ ಬಿದ್ದ ಕಾರಣ ೨೦ ಸಾವಿರ ರೂ. ಹಾನಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss