October 9, 2026
Friday, October 9, 2026
spot_img

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಿಡಿಲು ಸಹಿತ ಮಳೆಯಾರ್ಭಟ: ಬಂಟ್ವಾಳ ತಾಲೂಕಿನಲ್ಲಿ ಮನೆಗಳಿಗೆ ಹಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಭಾನುವಾರ ರಾತ್ರಿಯಿಂದ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭಗೊಂಡಿದ್ದು, ಬಂಟ್ವಾಳ ತಾಲೂಕಿನಲ್ಲಿ ಸಿಡಿಲಿನ ಆರ್ಭಟಕ್ಕೆ ಎರಡು ಕಡೆಗಳಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿದೆ.

ಪಂಜಿಕಲ್ಲು ಗ್ರಾಮದ ಸೌತೆ ಬಳ್ಳಿ ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು‌ಬಡಿದು ಭಾಗಶ: ಹಾನಿಯಾದ ಘಟನೆ ಸಂಭವಿಸಿದೆ. ಇಲ್ಲಿನ‌ ವಿಮಲಾ ಪೂಜಾರಿ ಎಂಬವರ ಅವರ ಮನೆಗೆ ಸಿಡಿಲು ಬಡಿದಿದ್ದು,ಮನೆಯ ಗೋಡೆ ಬಿರುಕು ಬಿಟ್ಟಿದ್ದಲ್ಲದೆ ವಿದ್ಯುತ್ ಉಪಕರಣಗಳ ಸಹಿತ ಸೊತ್ತುಗಳಿಗೆ ಹಾನಿಯಾಗಿದೆ. ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ಉಷಾ ಎಂಬವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ. ಇವರ ಮನೆಗೆ ಸಿಡಿಲು ಬಡಿದ ಪರಿಣಾಮ ಗೋಡೆ ಬಿರುಕು ಬಿಟ್ಟಿದ್ದಲ್ಲದೆ ವಿದ್ಯುತ್ ಉಪಕರಣಗಳ ಸಹಿತ ಸೊತ್ತುಗಳಿಗೂ ಅಪಾರ ಪ್ರಮಾಣದಲ್ಲಿ ಹಾಮಿಯಾಗಿದೆ.

ಎರಡೂ ಕಡೆಯಲ್ಲು ಯಾವುದೇ ಜೀವಾಪಾಯ ಸಂಭವಿಸಿಲ್ಲ ಎಂದು ಕಂದಾಯ ಇಲಾಖಾ ಮೂಲಗಳು ತಿಳಿಸಿವೆ. ಸುದ್ದಿ ತಿಳಿದ ಸ್ಥಳೀಯ ಪಂಚಾಯ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ‌ ನಷ್ಟದ ಬಗ್ಗೆ ಅಂದಾಜಿಸಿದ್ದಾರೆ.

Must Read