ವಿಜಯಪುರ ಜಿಲ್ಲೆಯಾದ್ಯಂತ ಭಾರಿ ಮಳೆ: ದೇವಸ್ಥಾನ, ಜಮೀನುಗಳು ಜಲಾವೃತ

ಹೊಸದಿಗಂತ ವರದಿ ವಿಜಯಪುರ:
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಹಳ್ಳ, ಕೊಳ್ಳ, ಜಮೀನು, ದೇವಸ್ಥಾನ ಮಳೆ ನೀರಿನಿಂದ ಜಲಾವೃತಗೊಂಡಿವೆ.

ಜಿಲ್ಲೆಯ ತುಬಚಿ – ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ಕಾಲುವೆಗೆ ಹರಿದ ನೀರಿನ ಜೊತೆ, ಮಳೆ ನೀರು ಸೇರಿ ಹಳ್ಳ, ಬಾಂದಾರಗಳು ತುಂಬಿ ಹರಿಯುತ್ತಿವೆ. ಅಲ್ಲದೇ, ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳ ತುಂಬಿ ಹರಿಯುತ್ತಿದ್ದು ಇದರಿಂದ ಸಂಗಮನಾಥ ದೇವಾಲಯದ ಆವರಣದಲ್ಲಿ ನೀರು ನುಗ್ಗಿದ್ದು ಮೊಳಕಾಲು‌ ಮಟ್ಟ ನೀರಿನಲ್ಲೇ ಭಕ್ತರು ದರ್ಶನ ಪಡೆಯುತ್ತಿದ್ದಾರೆ.‌
ಇನ್ನು ಸಂಗಮನಾಥ ಗರ್ಭ ಗುಡಿಯಲ್ಲೂ ಮೊಳಕಾಲದ ವರೆಗೆ ನೀರು ಹರಿಯುತ್ತಿದೆ.

ಜಿಲ್ಲೆಯ ಡೋಣಿ ನದಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಅಪಾರ ಪ್ರಮಾಣದ ನೀರು ಹರಿದು ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನೂರಾರು ಎಕರೆ ಜಮೀನು ಜಲಾವೃತಗೊಂಡಿವೆ. ಅಲ್ಲದೇ, ನದಿ ಪಾತ್ರದ ಜನರಲ್ಲಿ ಆತಂಕ ಎದುರಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!